ಕಲಬುರಗಿ: ವಾಲ್ಮೀಕಿ ಸಮಾಜ ಬಗ್ಗೆ ರಮೇಶ್ ಕತ್ತಿ ಹೇಳಿಕೆ ಖಂಡಿಸಿ ನಗರದಲ್ಲಿ ಕತ್ತೆ ಹಿಡಿದು ವಾಲ್ಮೀಕಿ ಸಮಾಜ ಪ್ರತಿಭಟನೆ
ಕಲಬುರಗಿ : ವಾಲ್ಮೀಕಿ ಸಮಾಜದ ಬಗ್ಗೆ ಮಾಜಿ ಸಂಸದ ರಮೇಶ್ ಕತ್ತಿ ಹೇಳಿಕೆ ಖಂಡಿಸಿ ಕಲಬುರಗಿಯಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ ನಡೆಸಲಾಗಿದೆ.. ಅಕ್ಟೋಬರ್ 20 ರಂದು ಸಂಜೆ 5 ಗಂಟೆಗೆ ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕತ್ತೆ ಹಿಡಿದು ರಮೇಶ್ ಕತ್ತಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.. ಇನ್ನೂ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರೋ ರಮೇಶ್ ಕತ್ತಿಯನ್ನ ಗಡಿಪಾರು ಮಾಡಬೇಕೆಂದು ವಾಲ್ಮೀಕಿ ಸಮಾಜ ಆಗ್ರಹಿಸಿದೆ..