ಹಿರಿಯೂರು: ನಗರದ ಬಿ ಆರ್.ಸಿ.ಕಚೇರಿಯಲ್ಲಿ ನೂತನ ಬಿ.ಆರ್.ಸಿ ಯಾಗಿ ಶ್ರೀನಿವಾಸ್ ಅಧಿಕಾರ ಸ್ವೀಕಾರ
ನಗರದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ನೂತನ ಬಿ.ಆರ್.ಸಿ.ಯಾಗಿ ಅಧಿಕಾರಿಯಾಗಿ ಶ್ರೀನಿವಾಸ್ ಅಧಿಕಾರ ಸ್ವೀಕಾರ ಮಾಡಿದರು ಇದೇ ಸಂದರ್ಭದಲ್ಲಿ ಬಿ.ಆರ್.ಸಿ.ಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಶ್ರೀಯುತ ತಿಪ್ಪೇರುದ್ರಪ್ಪರವರಿಗೆ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಸಹ ನಡೆಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ, ಶಶಿಧರ್, ಹರೀಶ್, ಸಿ.ಆರ್.ಪಿ.ಗಳಾದ ಚರಣ್, ಆಶಾಲತಾ, ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಇದ್ದರು.