ಧಾರವಾಡ: ನರೇಂದ್ರ ಗ್ರಾಮದಲ್ಲಿ ಲಾಠಿ ಚಾರ್ಜ್ ಪ್ರಕರಣ ಪೊಲೀಸ್ ಪೇದೆಗಳ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಆದೇಶ
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ೧೧ನೇ ದಿನದ ಗಣಪತಿ ಮೂರ್ತಿ ವಿಸರ್ಜನೆ ವೇಳೆ ನಡೆದ ಲಾಠಿ ಚಾರ್ಜ್ಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಇಬ್ಬರು ಪೇದೆಗಳನ್ನು ಅಮಾನತ್ತು ಮಾಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ. ನರೇಂದ್ರ ಗ್ರಾಮದಲ್ಲಿ ೧೧ನೇ ದಿನದ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಲಾಠಿ ಚಾರ್ಜ್ ನಡೆದ ನಂತರ ಇದು ರಾಜಕೀಯ ತಿರುವು ಪಡೆದುಕೊಂಡಿತ್ತು. ಸಿಪಿಐ ಕಮತಗಿ ಹಾಗೂ ಪೊಲೀಸ್ ಪೇದೆ ಸೈಯದ್ ಎಂಬ