ಸಂಡೂರು: ಗಣಿನಾಡಲ್ಲಿ ಇಂದು ಬಸ್‌ಗಳು ವ್ಯತ್ಯಯ, ಖಾಸಗಿ ಬಸ್ ಗಳತ್ತ ಮುಖ ಮಾಡಿದ ಪ್ರಯಾಣಿಕರು
ಕೂಡ್ಲಿಗಿ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಇಂದು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ಜೊತೆಗೆ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಲಿದೆ.ಈ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಒಟ್ಟು 165 ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ. ಇದರ ಪರಿಣಾಮವಾಗಿ ಸಂಡೂರು, ಜೊತೆಗೆ ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡತಿನಿ ಹಾಗೂ ಕಂಪ್ಲಿ ಭಾಗದಲ್ಲಿ ಇಂದಿನ ದೈನಂದಿನ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಗಿದೆ. ಇನ್ನು ಸಂಡೂರು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಖಾಸಿಗಿ ಬಸ್ ಗಳತ್ತ ಮುಖ ಮಾಡಿದ ದೃಶ್ಯ ನ.9,ಭಾನುವಾ