ಆನೇಕಲ್: ಶಾಂತಿಪುರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಮೋಹನ್ ಆಯ್ಕೆ , ಸದಸ್ಯರಿಂದ ಅಭಿನಂದನೆ ಸಲ್ಲಿಕೆ
ಆನೇಕಲ್ ತಾಲೂಕಿನ ಶಾಂತಿಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಮೋಹನ್ ಇಂದು ಆಯ್ಕೆಯಾಗಿದ್ದಾರೆ. ಪಂಚಾಯತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಮೋಹನ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ತಮಗೆ ಮತ ನೀಡಿದ ಎಲ್ಲಾ ಪಂಚಾಯಿತಿ ಸದಸ್ಯರಿಗೆ ಚಂದ್ರಮೋಹನ್ ಧನ್ಯವಾದ ಅರ್ಪಿಸಿದರು