ಹುಬ್ಬಳ್ಳಿ: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ವೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, 2026ರ ಮಾರ್ಚ್ ಅಂತ್ಯದಲ್ಲಿಯೂ ಮುಕ್ತಾಯವಾಗುವ ಲಕ್ಷಣಗಳು ಕಂಡುಬರುತ್ತಿಲ್ಲ. 2021ರ ಜೂನ್ 4ರಂದು ಕಾಮಗಾರಿಗೆ ಕಾರ್ಯಾದೇಶ ನೀಡಿ, 2024ರ ಜೂನ್ 4ರ ಒಳಗೆ ಮುಗಿಸಲು ಗಡುವು ನೀಡಲಾಗಿತ್ತು. ಕಾರ್ಮಿಕರ ಕೊರತೆ, ಮಳೆಗಾಲ, ಕಾನೂನು ತೊಡಕು ಇನ್ನಿತರ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಪೂರ್ಣಗೊಳಿಸಲು ವಿಳಂಬವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ಜಿಲ್ಲಾಡಳಿತ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸಹ ಅದಕ್ಕೆ ಸ್ಪಂದಿಸಿ, ಕಾಲಾವಧಿ ವಿಸ್ತರಿಸುತ್ತಲೇ ಬಂದಿದ್ದಾರೆ. ಆದರೆ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಿದ್ದ ರಸ್ತೆ, ಚರಂಡಿ ಕಾಮಗಾರಿ ಸಹ ಇನ್ನೂ ಆರಂಭವಾಗಿಲ್ಲ. ಇದ