ಹಳಿಯಾಳ: ಸಂವಿಧಾನ ವಿರೋಧಿ ಕೃತ್ಯಗಳನ್ನು ಖಂಡಿಸಿ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ವತಿಯಿಂದ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ
ಹಳಿಯಾಳ : ಸಂವಿಧಾನ ವಿರೋಧಿ ಮತ್ತು ದಲಿತ ವಿರೋಧಿ ಕೃತ್ಯಗಳನ್ನು ಖಂಡಿಸಿ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ವತಿಯಿಂದ ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಮೇಘರಾಜ ಆರ್ ಮೇತ್ರಿಯವರ ನೇತೃತ್ವದಲ್ಲಿ ಬುಧವಾರ ಸಂಜೆ 4:00 ಗಂಟೆ ಸುಮಾರಿಗೆ ಹಳಿಯಾಳದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭೀಮ್ ಆರ್ಮಿ ಉತ್ತರಕನ್ನಡ ಜಿಲ್ಲೆಯ ಉಸ್ತುವಾರಿ ಹಾಗೂ ನ್ಯಾಯವಾದಿಗಳಾದ ಮೇಘರಾಜ.ಆರ್. ಮೇತ್ರಿ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ಒಬ್ಬ ವಕೀಲನಿಂದ ಕಲಾಪದ ವೇಳೆ ನಡೆದ ಅಮಾನವೀಯ ಮತ್ತು ಅವಮಾನಕಾರಿ ಘಟನೆಯಾಗಿದೆ ಎಂದರು.