ಮಸ್ಕಿ: ಸಂತೆಕೆಲ್ಲೂರ ಗ್ರಾಮದ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಕಟ್ಟಡ ತೆರವಿಗೆ ನಗರದಲ್ಲಿ ತಹಶೀಲ್ದಾರ್ಗೆ ಮನವಿ
Maski, Raichur | Mar 25, 2024 ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರ ಗ್ರಾಮದ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಾಣ ಮಾಡುತ್ತಿರುವ ಕಟ್ಟಡವನ್ನು ತೆರುವುಗೊಳಿಸಿ, ಸ್ಮಶಾನ ಭೂಮಿಯನ್ನು ಹದ್ದುಬಸ್ತು ಮಾಡುವಂತೆ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಸದಸ್ಯರು ಒತ್ತಾಯಿಸಿದರು. ನಗರದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸದಸ್ಯರು ಕಟ್ಟಡ ತೆರವಿಗೆ ಆಗ್ರಹಿಸಿ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಇದ್ದರು.