ಹುಬ್ಬಳ್ಳಿ : ಇಲ್ಲಿನ ಎಸ್.ಎಸ್.ಕೃಷ್ಣ ನಗರದಲ್ಲಿರುವ ನಮ್ಮ ಕ್ಲಿನಿಕ್ ನಲ್ಲಿ ಡಿಸೆಂಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಹಾಗೂ ಪಾಲಿಕೆ ಸದಸ್ಯೆ ಫಾಮೀದಾ ಕಾರಡಗಿ ಅವರು ಚಾಲನೆ ನೀಡುವರು. ಆರೋಗ್ಯ ಇಲಾಖೆ ಅಧಿಕಾರಿಗಳು, ಪಾಲಿಕೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು ಸೇರಿದಂತೆ ಇತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. *