ಕಲಬುರಗಿ : ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸದೇ ನಿರ್ಲಕ್ಷ್ಯ ಮಾಡಲಾಗುತ್ತಿದೆ ಅಂತಾ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ನಾಲವಾರಕರ್ ಹೇಳಿದ್ದಾರೆ.. ಡಿಸೆಂಬರ್ 16 ರಂದು ಮಧ್ಯಾನ 12.30 ಕ್ಕೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಪ್ರಾರಂಭವಾಗಿ ಕೆಲವೇ ವರ್ಷಗಳಲ್ಲಿ ಸ್ಥಗಿತಗೊಂಡಿದ್ದು, ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹೊಡೆತ ಬಿದ್ದಿದೆ.. ತಕ್ಷಣ ವಿಮಾನ ನಿಲ್ದಾಣ ಪುನರಾರಂಭ ಮಾಡಬೇಕೆಂದು ಮಂಜುನಾಥ ನಾಲವಾರಕರ್ ಆಗ್ರಹಿಸಿದ್ದಾರೆ