ಯಲ್ಲಾಪುರ: ಜಿಲ್ಲೆಯಲ್ಲಿ ಅರಣ್ಯ ಹಕ್ಕುಮಂಜೂರಾತಿಗಾಗಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಎದುರಿಸುತ್ತಿರುವ ತೊಂದರೆಗಳನ್ನು ಶಾಸಕ ಶಿವರಾಮ ಹೆಬ್ಬಾರ ಅವರು ವಿಧಾನಸಭೆಯ ಕಲಾಪದ ಪ್ರಶೋತ್ತರ ಸಂದರ್ಭದಲ್ಲಿ ಸದನದ ಗಮನಕ್ಕೆ ತಂದಿದ್ದಾರೆ. ಜಿಲ್ಲೆಯ ಅನೇಕ ಫಲಾನು ಭವಿಗಳು ಅರಣ್ಯ ಹಕ್ಕುಗಳ ಮಂಜೂರಾತಿ ಪಟ್ಟಿಯನ್ನು ಪಡೆಯುವಲ್ಲಿ ಹಲವು ತೊಡಕುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆ ಯಿಂದಾಗಿ ಅರ್ಜಿದಾರರಿಗೆ ಆಗುತ್ತಿರುವ ಅನಾನುಕೂಲತೆಗಳನ್ನು ಮತ್ತು ವಿಳಂಬದ ಕಾರಣಗಳನ್ನು ಶಾಸಕರು ಸದನದಲ್ಲಿ ಪ್ರಸ್ತಾಪಿಸಿ, ಈ ಕುರಿತು ಶೀಘ್ರ ಪರಿಹಾರ ಒದಗಿಸುವಂತೆ ಒತ್ತಾಯಿಸಿ ದರು.