ಹೊಸಪೇಟೆ: ವಿಜಯನಗರ: ಟ್ರ್ಯಾಕ್ಟರ್-ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವು
ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಬಳಿಯ ನಂದಿಬಂಡಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಅಂಕಸಮುದ್ರ ಗ್ರಾಮದ ಶಿವಕುಮಾರ್ ಉಪ್ಪಾರ್ (38) ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.