ಮಾಗಡಿ: ತಿಪ್ಪಸಂದ್ರದಲ್ಲಿ ಸ್ಯಾಟಲೈಟ್ ಎಪಿಎಂಸಿ ಮಾರುಕಟ್ಟೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹ್ಯಾಂಡ್ ಪೋಸ್ಟ್ ಬಳಿ ಸ್ಯಾಟಲೈಟ್ ಎಪಿಎಂಸಿ ಮಾರುಕಟ್ಟೆ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಲಾಗಿದೆ. ರೈತರು ಹಾಗೂ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಮಾರುಕಟ್ಟೆ ಅಭಿವೃದ್ಧಿಪಡಿಸಲು ಮತ್ತು ಮೂಲಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.