ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಸಾವಿತ್ರಿಬಾಯಿ ಪುಲೆ ಅವರ ಜನ್ಮ ದಿನದ ಅಂಗವಾಗಿ ಅಕ್ಷರ ಅರಿವು ಕಾರ್ಯಕ್ರಮ ನಡೆಸಲಾಯ್ತು. ಸರ್ಕಾರಿ ಕಲಾ ಕಾಲೇಜು ಹಾಗೂ ಮಾನವ ಬಂಧುತ್ವ ವೇಧಿಕೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಯ್ತು. ಕಾರ್ಯಕ್ರಮಕ್ಕೆ ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲರಾದ ಡಾ.ಕರಿಯಪ್ಪ ಮಾಳಿಗೆ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಾವಿತ್ರಿಬಾಯಿ ಪುಲೆ ಅವರು ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿಯಾಗಿ ನಮ್ಮ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಅಲ್ಲದೆ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದೇ ಕೆಲಸ ಮಾಡಿದ್ದಾರೆ ಎಂದರು. ಈ ವೇಳೆ ಮಾನವ ಬಂಧುತ್ವ ವೇದಿಕೆ ಅಧ್ಯಕ್ಷರಾದ ಬಸವರಾಜ್ ಸೇರಿ ಹಲವು ಗಣ್ಯರು ಬಾಗಿಯಾಗಿದ್ದರು