ಕನಕಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಕ್ಕೆ ಜೆಡಿಎಸ್-ಬಿಜೆಪಿ ನಾಯಕರ ಭೇಟಿ
ಕನಕಪುರದಲ್ಲಿ ನಡೆಯುತ್ತಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಕ್ಕೆ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹೆಚ್.ಸಿ. ಜಯಮುತ್ತು ಮತ್ತು ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ.ಎನ್. ಆನಂದಸ್ವಾಮಿ ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಉಭಯ ಪಕ್ಷಗಳ ಮುಖಂಡರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.