ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸೇರಿ ವಿವಿಧೆಡೆ 4 ದಿನ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.