ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ