ಶಿವಮೊಗ್ಗ: ಜು.3ರಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಉದ್ಘಾಟನೆ: ನಗರದಲ್ಲಿ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಜ್ಯೋತಿ ಪ್ರಕಾಶ್
ಜುಲೈ 3ರಂದು ಶಿವಮೊಗ್ಗ ನಗರದ ಅರಕೆರೆ ಗ್ರಾಮದ ಶಂಕರ ಕಣ್ಣಿನ ಆಸ್ಪತ್ರೆ ಸಮೀಪದಲ್ಲಿ ನೂತನವಾಗಿ ಸುಮಾರು 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಶಿವಮೊಗ್ಗ ನಗರದಲ್ಲಿ ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್ಎಸ್ ಜ್ಯೋತಿಪ್ರಕಾಶ್ ಅವರು ಹೇಳಿದರು. ಸೋಮವಾರ ಶಿವಮೊಗ್ಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜುಲೈ 3ರಂದು ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಕಟ್ಟಡವನ್ನ ಉದ್ಘಾಟಿಸಿದರು ಸಮಾರಂಭವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸುತ್ತಾರೆ ಎಂದು ಹೇಳಿದರು.