ಶಿವಮೊಗ್ಗ: ಮನೆಯಿಂದ ಕೆಲಸಕ್ಕೆ ಹೋದ ಯುವತಿ ನಾಪತ್ತೆ, ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಕುಶಾಲ್ ಎಂಬುವರ ಮಗಳಾದಂತಹ ಪೂಜಾ.ಎ.ಕೆ(24) ಎಂಬಾಕೆ ಮನೆಯಿಂದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಕೆಲಸಕ್ಕೆಂದು ಹೊರಗೆ ಹೋದವಳು ಇದುವರೆಗೆ ವಾಪಾಸ್ ಬಂದಿರುವುದಿಲ್ಲ. ಕಾಣೆಯಾದ ಯುವತಿಯ ಚಹರೆ 4.6 ಅಡಿ ಎತ್ತರವಾದ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು,ಈಕೆಯ ಬಗ್ಗೆ ಯಾರಿಗಾದರೂ ಮಾಹಿತಿ ದೊರದಲ್ಲಿ ಶಿವಮೊಗ್ಗದ ಎಸ್ಪಿ ಕಚೇರಿ ದೂರವಾಣಿ ಸಂಖ್ಯೆ 08182-261400 ಯನ್ನು ಸಂಪರ್ಕಿಸುವಂತೆ ಶಿವಮೊಗ್ಗದಲ್ಲಿ ಪೊಲೀಸ್ ಅಧಿಕಾರಿಗಳು ಮಂಗಳವಾರ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.