ಶಿರಸಿ :ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಪರಿಶಿಷ್ಟ ಜಾತಿ ಕಾಲೋನಿಗಳ ಮೂಲಸೌಕರ್ಯಾಭಿವೃದ್ಧಿಗೆ ಮಹತ್ವದ ಪ್ರಾರಂಭ ಸಿಕ್ಕಿದೆ. ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಸುಮಾರು 7 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಿರುವ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.