ನಿತಿನ್ ನಾಬಿನ್ ಅವರನ್ನು ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಭ್ರಮಾಚರಣೆ ನಡೆಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಶ್ರೀ ಪಿ. ರಾಜೀವ್, ವಿಧಾನ ಪರಿಷತ್ ಸದಸ್ಯರು ಶ್ರೀ ಕೇಶವ ಪ್ರಸಾದ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರು ಶ್ರೀ ರಘು ಕೌಟಿಲ್ಯ, ಬೆಂಗಳೂರು ದಕ್ಷಿಣ, ಉತ್ತರ, ಮತ್ತು ಕೇಂದ್ರ ಜಿಲ್ಲಾಧ್ಯಕ್ಷರು ಹಾಗೂ ಶಾಸಕರು, ಮಾಜಿ ರಾಜ್ಯ ಕಾರ್ಯದರ್ಶಿಗಳು, ಪ್ರಮುಖರು ಮತ್ತು ಮಾಧ್ಯಮ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.