ನಿರ್ಗತಿಕರಿಗೆ ಮಂಜೂರಾಗಿರುವ ಮನೆಗಳ ಕಬಳಿಕೆ ವಿರುದ್ದ ಕ್ರಮಕ್ಕೆ ನಮ್ಮ ಕೋಲಾರ ರೈತ ಸಂಘ ಒತ್ತಾಯ ಕೋಲಾರ ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಬಡವರು, ನಿರ್ಗತಿಕರಿಗೆ ಮಂಜೂರಾಗಿರುವ ಮನೆಗಳನ್ನು ಸರ್ಕಾರಿ ನೌಕರರು ತಮ್ಮ ಪ್ರಭಾವವನ್ನು ಬೀರಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿರುತ್ತಾರೆ. ಈ ವಿಚಾರದಲ್ಲಿ ನಮ್ಮ ಕೋಲಾರ ರೈತ ಸಂಘವು ಸುಮಾರು ಬಾರಿ ಹೋರಾಟ ಮಾಡಿರುವುದಲ್ಲದೆ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಹಾಗಾಗಿ ಕೂಡಲೇ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ನಮ್ಮ ಕೋಲಾರ ರೈತ ಸಂಘವು ಕೋಲಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮಂಗಳವ