ಸಾಲಿಗ್ರಾಮ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಕಾರ್ಯಕ್ರಮ ಶುಕ್ರವಾರ ನಾಲ್ಕು ಗಂಟೆಯಲ್ಲಿ ಜರುಗಿತು. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಸಮಾಜದ ಮುಖಂಡರು ಸಹಕರಿಸಬೇಕು ಎಂದು ತಹಶೀಲ್ದಾರ್ ನರಗುಂದ ಮನವಿ ಮಾಡಿದರು. ಬಾಬು ಜಗಜೀವನ್ ರಾಮ್ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದರು.