ಹೆಗ್ಗಡದೇವನಕೋಟೆ: ನುಡಿದಂತೆ ನಡೆದ ಸರ್ಕಾರ ನಮ್ಮದು : ಜಿಬಿ ಸರಗೂರಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು
ಚಾಮರಾಜನಗರ ಲೋಕಸಭಾ ಚುನಾವಣೆ ಅಂಗವಾಗಿ ಭಾನುವಾರ ಮಧ್ಯಾಹ್ನ ಎರಡರ ವೇಳೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಜಿ.ಬಿ. ಸರಗೂರು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರ ಪರ ಶಾಸಕ ಅನಿಲ್ ಚಿಕ್ಕಮಾದು ಮತಯಾಚನೆ ಮಾಡಿದರು. ನಂತರ ಮಾತನಾಡಿದ ಅವರು ಕಾಂಗ್ರೆಸ್ ಬಡವರ ಪರ ಇರುವ ಸರ್ಕಾರ, ಸಮಾಜವಾದಿ ತತ್ವವನ್ನು ಅಳವಡಿಸಿಕೊಂಡಿರುವ ಸರ್ಕಾರ, ಬಿಜೆಪಿ ಯಾವುದೇ ಜನಪರ ಕೆಲಸಗಳನ್ನು ಮಾಡಿಲ್ಲ, ಕಾಂಗ್ರೆಸ್ ಜನಪರ ಕೆಲಸಗಳಾದ ಆಹಾರ ಭದ್ರತೆ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಕಾಯ್ದೆ ಸೇರಿದಂತೆ ಹಲವಾರು ಜನಪರ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ ಎಂದರು