ಶ್ರೀನಿವಾಸಪುರ: ನಿಯಂತ್ರಣ ತಪ್ಪಿ ರಸ್ತೆಬದಿ ಕಾಲುವೆಗೆ ಉರುಳಿ ಕಂಬಕ್ಕೆ ಡಿಕ್ಕಿ ಹೊಡೆದ ಕಾರು :
ಕೂಸಂದ್ರ ಕ್ರಾಸ್ ಬಳಿ ಘಟನೆ
ನಿಯಂತ್ರಣ ತಪ್ಪಿ ರಸ್ತೆಬದಿ ಕಾಲುವೆಗೆ ಉರುಳಿದ ಕಾರು; ಕಂಬಕ್ಕೆ ಡಿಕ್ಕಿ, ಪ್ರಾಣಾಪಾಯದಿಂದ ಪಾರು! ಶ್ರೀನಿವಾಸಪುರ ತಾಲೂಕಿನ ಕೂಸಂದ್ರ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಆಂಧ್ರಪ್ರದೇಶದಿಂದ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಸಂಪೂರ್ಣವಾಗಿ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶನಿವಾರ ಸಂಜೆ 6 ಗಂಟೆಯಲ್ಲಿ ಘಟನೆ ಸಂಭವಿಸಿದ್ದು, ಆಂಧ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಗದ ಕಾರು ಕೂಸಂದ್ರ ಕ್ರಾಸ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಕ್ಷಣ ಮಾತ್ರದಲ್ಲಿ ರಸ್ತೆಯ ಬದಿಗೆ ಇಳಿದ ಕ