ಬೆಂಗಳೂರು ಉತ್ತರ: ನಗರವನ್ನು ಬ್ಲ್ಯಾಕ್ ಸ್ಪಾಟ್ ಮುಕ್ತಗೊಳಿಸಲು ನಾಗರಿಕರಲ್ಲಿ ಜಾಗೃತಿ ಮೂಡಿಸಿ: ನಗರದಲ್ಲಿ ದಲ್ಜಿತ್ ಕುಮಾರ್
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಆಯುಕ್ತರಾದ ದಲ್ಜಿತ್ ಕುಮಾರ್ ರವರು ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಯ ಪಾದರಾಯನಪುರ, ಜೆ. ಜೆ. ಆರ್ ನಗರ, ಚಲುವಾದಿಪಾಳ್ಯ ಪ್ರದೇಶಗಳಲ್ಲಿ ಸ್ಥಳ ಪರಿಶೀಲನೆ ಕಾರ್ಯ ನಡೆಸಿದರು. ಸ್ಥಳ ಪರಿಶೀಲನೆ ವೇಳೆ ಎಲ್ಲಾ ರಸ್ತೆಗಳಲ್ಲಿ ಕಸದ ರಾಶಿ ಗಮನಿಸಿದ ಅವರು ರಸ್ತೆಗಳನ್ನು ಬ್ಲ್ಯಾಕ್ ಸ್ಪಾಟ್ ಮುಕ್ತಗೊಳಿಸದಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಹಾಗೂ ನಗರವನ್ನು ಬ್ಲ್ಯಾಕ್ ಸ್ಪಾಟ್ ಮುಕ್ತಗೊಳಿಸಬೇಕಾದರೆ ಸಾರ್ವಜನಿಕರ ಸಹಕಾರ ಅಗತ್ಯವಿದ್ದು, ತ್ಯಾಜ್ಯ ರಸ್ತೆಯಲ್ಲಿ ಎಸೆಯದಂತೆ ಜನಜಾಗೃತಿ ಮೂಡಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.