ಮಳವಳ್ಳಿ: ಡಿ. 15 ರಿಂದ 22 ರ ವರೆಗೆ ಪಟ್ಟಣದಲ್ಲಿ ನಡೆಯಲಿರುವ ಸುತ್ತೂರಿನ ಅದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ 1066ನೇ ಜಯಂತಿ ಮಹೋತ್ಸ ವದ ಹಿನ್ನೆಲೆಯಲ್ಲಿ ಗುರುವಾರ ಸಾಯಂಕಾಲ 4.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣಕ್ಕೆ ಆಗಮಿಸಿದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು, ಜಿಲ್ಲಾ ಧಿಕಾರಿ ಡಾ.ಕುಮಾರ್ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರುಗಳು ಭೇಟಿ ನೀಡಿ ವೇದಿಕೆ ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿದರು. ಪಟ್ಟಣದ ಶಾಂತಿ ಕಾಲೇಜಿನ ಮುಂಭಾಗದಲ್ಲಿರುವ ಪುರಸಭೆಯ 33 ಎಕರೆ ಜಾಗದಲ್ಲಿ ನಿರ್ಮಾಣ ವಾಗುತ್ತಿರುವ ಬೃಹತ್ ವೇದಿಕೆ ಸ್ಥಳಕ್ಕೆ ಭೇಟಿ ನೀಡಿದ ಸುತ್ತೂರು ಶ್ರೀಗಳು ವೇದಿಕೆ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಶರೀಪ್ ಮತ್ತು ತಂಡದ ಜೊತೆ ಸುದೀರ್ಘ ವಾಗಿ ಚರ್ಚೆ ನಡೆಸಿದರು.