ರಾಯಚೂರು: ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ:
ಅಭ್ಯರ್ಥಿಗಳೊಂದಿಗೆ ಸಂವಾದ ಇಂದು
ರಾಯಚೂರು ಜಿಲ್ಲಾಡಳಿತವು ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವು ರಾಯಚೂರು ನಗರದ ಶ್ರೀ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮAದಿರದ ಹಿಂದುಗಡೆಯ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ನವೆಂಬರ್ 20ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯ ಮಧ್ಯಾಹ್ನ 12.30ರೊಳಗೆ ಎರಡು ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ಆಧಾರ್ ಕಾರ್ಡ್ ಫೋಟೋ ಕಾಪಿಯೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾಡಳಿತದ ಬುಧವಾರ 6 ಗಂಟೆಗೆ ಪ್ರಕಟಣೆಗೆ ತಿಳಿಸಿದೆ.