ಯಡ್ರಾಮಿ: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕಾನೂನುಬದ್ದ ವ್ಯವಹಾರದ ಸೂಚನೆ: ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಸಭೆ
ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಲೇವಾದೇವಿದಾರರೊಂದಿಗೆ ಸಭೆ ನಡೆಯಿತು. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಾನೂನುಬದ್ದವಾಗಿ ವ್ಯವಹಾರ ನಡೆಸಿ, ಸರ್ಕಾರ ನೀಡುವ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಸೂಚಿಸಲಾಯಿತು. ಜೊತೆಗೆ ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಧಿಕಾರಿಗಳು ಸೂಚಿಸಿದರು. ಈ ಸಭೆಯಲ್ಲಿ ಯಡ್ರಾಮಿ ತಹಶೀಲ್ದಾರರು ಸಹ ಉಪಸ್ಥಿತರಿದ್ದರು