ಮೊಳಕಾಲ್ಮುರು: ತಾಲೂಕಿನಲ್ಲಿ ಸಹಕಾರಿ ಕ್ಷೇತ್ರ ಇನ್ನಷ್ಟು ಗಟ್ಟಿಗೊಳ್ಳಬೇಕಿದೆ:-ತಮ್ಮೇನಹಳ್ಳಿಯಲ್ಲಿ ಶಾಸಕ ಎನ್ ವೈ ಗೋಪಾಲಕೃಷ್ಣ
ಮೊಳಕಾಲ್ಮುರು:-ರೈತಾಪಿ ವರ್ಗದವರ ಸಾಮಾಜಿಕ ,ಆರ್ಥಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರ ಪೂರಕವಾಗಿದ್ದು ಪ್ರತಿಯೊಬ್ಬರು ಇಲ್ಲಿ ಸಿಗುವ ಸೌಲಭ್ಯಗಳನ್ನ ಸದ್ಬಳಕೆ ಮಾಡಿಕೊಳ್ಳುವ ಜತೆಗೆ ಸಕಾಲಕ್ಕೆ ಸಾಲ ಮರುಪಾವತಿಸಿ ಸಹಕಾರ ಕ್ಷೇತ್ರವನ್ನು ಇನ್ನಷ್ಟು ಗಟ್ಟಿಗೊಳಿಸಬೇಕೆಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. ತಾಲೂಕಿನ ತಮ್ಮೇನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ಅವರಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ,ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್,ಜಿಲ್ಲಾ ಸಹಕಾರ ಯುನಿಯನ್ ನಿಯಮಿತ ಹಾಗೂ ತಾಲೂಕಿನ ಸಹಕಾರ ಸಂಘಗಳ ಹಾಗೂ ಬ್ಯಾಂಕುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.