ಬುಧವಾರ ಮುಂಜಾನೆ ಬೆಂಗಳೂರಿನ ತುಮಕೂರು ರಸ್ತೆಯ ಮಾಕಳಿ ಬಳಿ ಈರುಳ್ಳಿ ತುಂಬಿದ್ದ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೊಲ್ಲಾಪುರದಿಂದ ಬೆಂಗಳೂರಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿ, ಮುಂದಿದ್ದ ಆಟೋಗೆ ಡಿಕ್ಕಿ ಹೊಡೆದು ನಂತರ ಎದುರಿಗೆ ಬರುತ್ತಿದ್ದ ಬೈಕ್ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಮತ್ತೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.