ಬೆಂಗಳೂರಿನ ವಿಜಯನಗರದ ಪೈಪ್ ಲೈನ್ ರಸ್ತೆಯಲ್ಲಿ ಭಾರಿ ಗಾಳಿಯಿಂದ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಪರಿಣಾಮ ಮರದ ಕೆಳಗೆ ನಿಲ್ಲಿಸಿದ್ದ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಸಂಜೆ ಭಾರಿ ಗಾಳಿ ಬಿಸಿದ ಪರಿಣಾಮ ಮರ ನೆಲಕ್ಕೆ ಅಪ್ಪಳಿಸಿದೆ. ರಸ್ತೆಗೆ ಮರ ಬಿದ್ದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿತ್ತು . ಕೂಡಲೇ ಬಿಬಿಎಂಪಿ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಮರವನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.