ವಡಗೇರಾ: ಮಳೆಯಿಂದ ಬೆಳೆ ಹಾನಿಯಾದ ಹಾಲಗೇರಾ ಗ್ರಾಮದ ರೈತರ ಜಮೀನುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ಪರಿಶೀಲನೆ
ಯಾದಗಿರಿ ಜಿಲ್ಲೆಯ ವಡಗೆರಾ ತಾಲೂಕಿನ ಹಾಲಗೇರ ಗ್ರಾಮಕ್ಕೆನಮ್ಮ ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶರಣಬಸಪ್ಪ ಗೌಡ ದರ್ಶನಾಪುರ ಗ್ರಾಮದಲ್ಲಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಅತಿಯಾದ ಮಳೆ ಮತ್ತು ತೀವ್ರ ಪ್ರವಾಹದಿಂದಾಗಿ ಹಾನಿಗೊಳಗಾದ ಸ್ಥಳಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ನಾಗರೀಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮತ್ತು ಹಾನಿಗೊಳಗಾದ ಬೆಳೆಗಳ ಬಗ್ಗೆ ಮಾಹಿತಿ ನೀಡಲು ಹಾಗೂ ಪರಿಹಾರದ ಬಗ್ಗೆ ಕ್ರಮವಹಿಸಿಲು ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು