ಹೊನ್ನಾವರ : ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಇಕೋ ಬೀಚ್ , ಕಾಂಡ್ಲಾ ವನ , ಕಳಸಿನ ಮೂಟೆ ಪ್ರದೇಶಗಳಿಗೆ ಪಿಎಸ್ಐ ಮಂಜುನಾಥ್ ಅವರ ನೇತೃತ್ವದಲ್ಲಿ ಇಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:00 ವರೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಸಮುದ್ರ ಅಥವಾ ಹಿನ್ನೀರಿನ ಅಪಾಯದ ಬಗ್ಗೆ ಹಾಗೂ ಸಂಚಾರ ನಿಯಮಗಳು, ಸೈಬರ್ ಅಪರಾಧ ಮತ್ತು ಸಹಾಯವಾಣಿ 112, 1930, 1933, 1098 ಬಗ್ಗೆ ತಿಳಿಸಿ ಜಾಗೃತಿ ಮೂಡಿಸಲಾಯಿತು.