ಬಸವಕಲ್ಯಾಣ: ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ ವಸತಿ ನಿಲಯದಲ್ಲಿ ಅಡುಗೆ ಸಹಾಯಕ ವಜಾ; ನಗರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಾಹಿತಿ
ಬಸವಕಲ್ಯಾಣ ನಗರದಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹೊರಸಂಪನ್ಮೂಲದಿಂದ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಮೋದಕುಮಾರ ಅಶೋಕಕುಮಾರ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಸಂಸ್ಥಾಪಕ ಗಗನ ಫುಲೆ ಅವರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ವಾಟ್ಸಾಪ್ ಮೂಲಕ ದೂರು ಸಲ್ಲಿಸಿದ್ದರು. ಸರ್ಕಾರದಿಂದ ವೇತನ ಪಡೆಯುತ್ತಿರುವ ಖಾಯಂ/ಹೊರಸಂಪನ್ಮೂಲ ಸಿಬ್ಬಂದಿಯವರು ಯಾವುದೇ ಸಂಘ-ಸಂಸ್ಥೆಗಳಲ್ಲಿ ಭಾಗಿಯಾಗಿರುವುದು ಕಾನೂನಿನ ಪ್ರಕಾರ ನಿ