ಚಿಕ್ಕಬಳ್ಳಾಪುರ: ನಮಸ್ತೆ ಚಿಕ್ಕಬಳ್ಳಾಪುರ ಹೆಸರಲ್ಲಿ ನಗರದಲ್ಲಿ ಮನೆ-ಮನೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ನಮಸ್ತೆ ಚಿಕ್ಕಬಳ್ಳಾಪುರ ಹೆಸರಲ್ಲಿ ಇಂದು ಸೋಮವಾರ ಬೆಳಗ್ಗೆ ಏಳು ಗಂಟೆಯಲ್ಲಿ ನಗರದ ಕಂದವರ ಪೇಟೆಯಿಂದ ಮನೆ ಮನೆ ಭೇಟಿ ನೀಡಿ ಸಮಸ್ಯೆ ಆಲಿಸಿದರು ಶಾಸಕ ಪ್ರದೀಪ್ ಈಶ್ವರರು ಮನೆ ಮನೆ ಭೇಟಿ ನೀಡುವ ಹಿನ್ನಲೆಯಲ್ಲಿ ತಮ್ಮ ಹಲವಾರು ಸಮಸ್ಯೆಗಳನ್ನು ಹೇಳಿಕೊಂಡು ಸಮಸ್ಯೆಗಳನ್ನು ನೀಗಿಸುವಂತೆ ಶಾಸಕ ಪ್ರದೀಪ್ ಈಶ್ವರ ಅವರಿಗೆ ಅವಲತ್ತುಕೊಂಡರು ಈ ಸಂದರ್ಭದಲ್ಲಿ ಕಾಂಗ್ರೆಸ್ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಿ ಸೇರಿದಂತೆ ಹಲವು ಮುಖಂಡರು ಇದ್ದರು.