ಟಿಪ್ಪರ್ ಹಾಗೂ ಇನೋವ ಕಾರು ನಡುವೆ ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನವಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ಜರುಗಿದೆ. ಹುಣಸೂರು ಮೂಲದ ಚಂದ್ರಶೇಖರ ಮೃತ ವ್ಯಕ್ತಿ. ಬುಧವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದೆ. ಹುಣಸೂರು ಕಡೆಗೆ ಹೋಗುತ್ತಿದ್ದ ಕಾರು ಶ್ರೀರಂಗಪಟ್ಟಣ ಕಡೆಗೆ ಬರುತ್ತಿದ್ದ ಡಿಪ್ಪರ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಕ್ಷಣಾರ್ಧದಲ್ಲೆ ಬೆಂಕಿ ಹರಡಿಕೊಂಡು ಕಾರಿನಿಂದ ಹೊರಬರಲಾರದೆ ಚಾಲಕ ಚಂದ್ರಶೇಖರ್ (30) ಸಜೀವವಾಗಿದ್ದಾರೆ. ಚಂದ್ರಶೇಖರ್ ಮೃತದೇಹವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ. ಶ್ರೀರಂಗಪಟ್ಟಣ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.