ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ
Mysuru, Mysuru | Sep 15, 2025 ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ 750 ಕೆ ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುವ ಅಭಿಮನ್ಯುವಿಗೆ ಮರದ ಅಂಬಾರಿ ಹೊರಿಸಿ ತಾಲೀಮು. ಜಂಬೂಸವಾರಿ ಮೆರವಣಿಗೆಯ ದಿನ ಚಿನ್ನದ ಅಂಬಾರಿ ಕಟ್ಟುವ ಸ್ಥಳದಲ್ಲೇ ಮರದ ಅಂಬಾರಿ ಕಟ್ಟುವ ಕಾರ್ಯ ನೆರವೇರಿಕೆ. ಸಂಪ್ರದಾಯಬದ್ದವಾಗಿ ಪೂಜೆ ಸಲ್ಲಿಸಿದ ಬಳಿಕ ಅಭಿಮನ್ಯುವಿಗೆ ಮರದ ಅಂಬಾರಿ ಹೊರಿಸಿದ ಅರಣ್ಯ ಇಲಾಖೆ ಸಿಬ್ಬಂದಿ. ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಮರದ ಅಂಬಾರಿ ಹೊತ್ತು ಸಾಗಿದ ಅಭಿಮನ್ಯುವಿಗೆ ಕಾವೇರಿ ಮತ್ತು ಹೇಮಾವತಿ ಕುಮ್ಕಿ ಆನೆಗಳಾಗಿ ಸಾಥ್. ಇನ್ನುಳಿದ ಹನ್ನೊಂದು ಆನೆಗಳು ಕೂಡ ತಾಲೀಮಿನಲ್ಲಿ ಭಾಗಿ.