ಚಾಮರಾಜನಗರ: ನಗರದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ನಾಯಕ ಸಮುದಾಯದ ಆಕ್ರೋಶ
ಮಾಜಿ ಸಂಸದ ರಮೇಶ್ ಕತ್ತಿ ಬಳಸಿದ ಆಕ್ಷೇಪಾರ್ಹ ಪದ ಬಳಕೆ ಖಂಡಿಸಿ ನಾಯಕ ಸಮುದಾಯದವರು ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು. ವಾಲ್ಮೀಕಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸಮುದಾಯದ ಮುಖಂಡರು ಆಕ್ಷೇಪಾರ್ಹ ಪದ ಬಳಸಿದ ರಮೇಶ್ ಕತ್ತಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಅಸಮಾಧಾನ ಹೊರಹಾಕಿದರು. ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದು ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ರಮೇಶ್ ಕತ್ತಿ ಆಡಿದ ಮಾತಿನಿಂದ ಸಂಘರ್ಷಕ್ಕೆ ಪ್ರಚೋದಿಸಲಿದೆ ಕೂಡಲೇ ರಮೇಶ್ ಕತ್ತಿ ವಿರುದ್ಧ ಜಾತಿನಿಂದನೆ ಕೇಸ್ ದಾಖಲಿಸಿ ಕ್ರಮಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.