ಶಿವಮೊಗ್ಗ: ಬಾಲ ಕಾರ್ಮಿಕರ ನೇಮಕ ವಿರುದ್ಧ ಪ್ರಕರಣ ದಾಖಲಿಸಿ: ನಗರದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಬಾಲ ಕಾರ್ಮಿಕರ ನೇಮಕ ನಿರ್ಮೂಲನೆ ಕಾರ್ಯಾಚರಣೆ ಮಾಡಬೇಕು. ಈ ಕಾರ್ಯಾಚರಣೆ ನಗರ ಪ್ರದೇಶಗಳಿಗೆ ಮಾತ್ರ ಸಿಮೀತವಾಗದೆ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣ ದಾಖಲಿಸಿ, ಮಕ್ಕಳ ಸಂರಕ್ಷಣಾ ಕಾರ್ಯ ನಡೆಯಬೇಕೆಂದು ಜಿಲ್ಲಾಧಿಕಾರಿ ಗುತುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜೂ 1 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಕಾರ್ಯನಿರ್ವಾಹಕ ಸಮಿತಿ, ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಕಾರ್ಮಿಕರು ಯಾವ ಯಾವ ಕೇತ್ರದಲ್ಲಿ ಹೆಚ್ಚು ಕಂಡು ಬರುತ್ತಿದ್ದಾರೆ ಎಂದು ಪತ್ತೆ ಹಚ್ಚಬೇಕು. ಸಂಬಂಧಿಸಿದ ಅಧಿಕಾರಿಗಳು ಮಕ್ಕಳನ್ನು ರಕ್ಷಿಸುವ ಕೆಲಸ ಜವಾಬ್ಧಾರಿಯುತವಾಗಿ ನಿರ್ವಹಿಸಬೇಕು ಎಂದರು.