ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಶಿವಗಂಗೆಯ ಪುಣ್ಯಕ್ಷೇತ್ರದಲ್ಲಿ ಆಯೋಜಿಸಿದ್ದ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಾಸಕ ನೆಲಮಂಗಲ ಎನ್. ಶ್ರೀನಿವಾಸ್ ಅವರು ಭಾಗವಹಿಸಿದರು. ನಮ್ಮ ನಾಡಿನ ಕಲೆ, ಸಂಸ್ಕೃತಿ ಮತ್ತು ರಂಗಭೂಮಿಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ನಾಟಕೋತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಕಲಾವಿದರನ್ನು ಗೌರವಿಸಿ, ಕೆಲ ಸಮಯ ನಾಟಕವನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಮುಖಂಡರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.