ಸಿಂದಗಿ: ತಾಲೂಕಿನಲ್ಲಿ 7,353 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ: ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ
ತಾಲೂಕಿನಲ್ಲಿ ಮಾರ್ಚ್ 25ರಿಂದ ಏಪ್ರಿಲ್ 6ರ ವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 7,353 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಂದು ಬಿಇಒ ಆರೀಫ್ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ವ್ಯಾಪ್ತಿಯ ಸಿಂದಗಿ ತಾಲೂಕಿನಲ್ಲಿ 8 ಪರೀಕ್ಷಾ ಕೇಂದ್ರಗಳು, ಆಲಮೇಲ ತಾಲೂಕಿನಲ್ಲಿ 6, ದೇವರಹಿಪ್ಪರಗಿ ತಾಲೂಕಿನಲ್ಲಿ 7, ತಾಳಿಕೋಟಿ ತಾಲೂಕಿನ 3 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು. ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.