ನಾಂದಿ ಫೌಂಡೇಶನ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪಟ್ಯದ ಜೊತೆಗೆ ಕೌಶಲ್ಯ ತರಬೇತಿ ನೀಡುತ್ತಿರುವುದು ವಿದ್ಯಾರ್ಥಿಗಳ ಜೀವನ ರೂಪಿಸಿಕೊಳ್ಳಲು ಸಾಕಷ್ಟು ಉಪಯುಕ್ತವಾಗಲಿದೆ. ಇದನ್ನ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಭಾರಿ ಮುಖ್ಯೋಪಾಧ್ಯಾಯ ಶಿವರಾಜ್ ಹೇಳಿದರು. ರಾಯಚೂರು ತಾಲೂಕಿನ ಸಗಮಕುಂಟ ಗ್ರಾಮದಲ್ಲಿ ಇರುವಂತಹ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಕೆ ಕೌಶಲ್ಯ ತರಬೇತಿ ವಿಷಯಗಳು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ವಿಷಯಗಳು ನಿಜಕ್ಕೂ ಉತ್ತಮವಾಗಿದೆ. ವಿದ್ಯಾರ್ಥಿಗಳು ಇದನ್ನ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.