ಶಿವಮೊಗ್ಗ: ಸಂದೇಹಗಳು ಎದುರಾದಲ್ಲಿ ನಮ್ಮ ಸಂವಿಧಾನ ಓದಿದರೆ ಉತ್ತರ ಸಿಗುತ್ತದೆ, ಶಿವಮೊಗ್ಗದಲ್ಲಿ ಡಿಸಿ ಗುರುದತ್ತ ಹೆಗಡೆ
ಜೀವನದಲ್ಲಿ ಯಾವುದೇ ರೀತಿಯ ಸಂಶಯ, ಸಂದೇಹಗಳು ಎದುರಾದಲ್ಲಿ ನಮ್ಮ ಸಂವಿಧಾನ ಓದಿದರೆ ಉತ್ತರ ಸಿಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಶಾಲಾ ಶಿಕ್ಷಣ ಮತ್ತು ಕಾಲೇಜು ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲರನ್ನೂ ಸಮಾನತೆಯಿಂದ ಕಾಣಲು, ಎಲ್ಲ ರೀತಿಯ ನ್ಯಾಯ ಒದಗಿಸಲು ಮಾರ್ಗಸೂಚಿಯಾಗಿರುವ ನಮ್ಮ ಸಂವಿಧಾನವನ್ನು ಮಕ್ಕಳು ಸೇರಿದಂತೆ ಎಲ್ಲರೂ ಓದಿ, ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.