ರಾಯಚೂರು ಜಿಲ್ಲೆಯ ದೇವತಾರ್ಗ ತಾಲೂಕಿನಲ್ಲಿ ಹರಿಯುವ ಕೃಷ್ಣ ನದಿಯಲ್ಲಿ ಸಾಕಷ್ಟು ರೀತಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸಲಾಗುತ್ತಿದೆ ರಾತ್ರೋರಾತ್ರಿ ನದಿಗೆ ಜೆಸಿಬಿಗಳನ್ನ ಇಳಿಸಿ ಟ್ರಾಕ್ಟರ್ ಲಾರಿಗಳ ಮುಖಾಂತರ ಮರಳನ್ನ ಸಾಗಿಸಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಹನುಮಂತ ಬಂಗಿ ಆರೋಪಿಸುತ್ತಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ, ಯಾವುದೇ ಕ್ರಮ ಜರುಗಿಸುತ್ತಿಲ್ಲ ಅಕ್ರಮದಲ್ಲಿ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿ ಬರುತ್ತಿದೆ. ಕೂಡಲೇ ಪೊಲೀಸ್ ಇಲಾಖೆಯಿಂದ ಗಮನಹರಿಸಿ ಅಕ್ರಮ ಮರುಳುಗಾರಿಗೆ ತಡೆಯುವಲ್ಲಿ ಕ್ರಮ ಕೈಗೊಳ್ಳಬೇಕಿದೆ.