ಕಂಪ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಿ.9, ಮಂಗಳವಾರ ಮಧ್ಯಾಹ್ನ 1ಕ್ಕೆ ನಡೆದ ಕರ್ನಾಟಕ ಪತ್ರಕರ್ತರ ಸಂಘದ ಸಭೆಯಲ್ಲಿ 2025–28ನೇ ಸಾಲಿನ ಕಂಪ್ಲಿ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ರಘುವೀರ್ ಸಿದ್ದಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮಾತನಾಡಿದ ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಯಾಳ್ಪಿ ವಲಿಭಾಷಾ ಅವರು, “ಕಂಪ್ಲಿ ತಾಲೂಕು ಘಟಕದ ಅಧ್ಯಕ್ಷರಾಗಿ ರಘುವೀರ್ ಸಿದ್ದಿ ಅವಿರೋಧವಾಗಿ ಆಯ್ಕೆ ಆಗಿರುವುದು ಅಭಿನಂದನೀಯ. ಎಲ್ಲ ಪತ್ರಕರ್ತರನ್ನು ಒಗ್ಗೂಡಿಸಿಕೊಂಡು ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು,” ಎಂದು ಸಲಹೆ ನೀಡಿದರು. ಇನ್ನು ಉಪಾಧ್ಯಕ್ಷರಾಗಿ ಸಚ್ಚಿದಾನಂದ, ಖಜಾಂಚಿಯಾಗಿ ಚ