ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು. ಅದು ಮುಚ್ಚಿದರೆ ಒಂದು ವ್ಯವಸ್ಥೆ ಮುಚ್ಚಿದಂತಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಜಿಲ್ಲಾಡಳಿತ ವತಿಯಿಂದ ಶನಿವಾರ ಮಧ್ಯಾಹ್ನ 1 ಗಂಟೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಆಯೋಜಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಅನಾವಣಗೊಳಿಸಲು ಅವಕಾಶ ಕಲ್ಪಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳೂ ಕೂಡ ಅತ್ಯಗತ್ಯವಾಗಿದ್ದು, ಸರ್ಕಾರಿ ಶಾಲೆಗಳು ಇಂತಹ ಚಟುವಟಿಕಗಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿವೆ.