ಶಿರಹಟ್ಟಿ: ಹೆಬ್ಬಾಳ ಗ್ರಾಮದಲ್ಲಿ ಶ್ರೀ ಆದಿ ರೇಣುಕಾಚಾರ್ಯ ಜಯಂತಿ ಆಚರಣೆ
ತಾಲ್ಲೂಕಿನ ಹೆಬ್ಬಾಳ ಗ್ರಾಮದಲ್ಲಿ ಶ್ರೀ ಆದಿ ರೇಣುಕಾಚಾರ್ಯರ ಜಯಂತಿಯನ್ನು ಭಾನುವಾರ ಮಧ್ಯಾಹ್ನ 1 ಗಂಟೆಗೆ ಅದ್ಧೂರಿಯಾಗಿ ಆಚರಿಸಲಾಯಿತು. ಆದಿ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮವು ಗ್ರಾಮದ ಶ್ರೀ ಸಣ್ಣ ಹಾಲಸ್ವಾಮಿಗಳು ಸಾನಿಧ್ಯದಲ್ಲಿ ಜರುಗಿತು. ಶ್ರೀ ಆದಿ ರೇಣುಕಾಚಾರ್ಯರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.