ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಶ್ರೀರಾಮಪುರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶಿರಡಿ ಸಾಯಿ ವಿದ್ಯಾ ಪೀಠ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾಗಿಯಾದರು. ಆರೋಗ್ಯ ತಪಾಸಣೆಯಂತಹ ಸಾಮಾಜಿಕ ಕಾರ್ಯಕ್ರಮಗಳು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಶಿಬಿರಗಳ ಪ್ರಯೋಜನವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.