ಗುಂಡ್ಲುಪೇಟೆ ಪಟ್ಟಣದ ಚಾಮರಾಜನಗರ ಮುಖ್ಯ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಶ್ರೀ ಆಂಜನೇಯ ಸ್ವಾಮಿ ಮೂಲ ವಿಗ್ರಹಕ್ಕೆ ಮುಂಜಾನೆ ಬ್ರಾಹಿ ಮಹೋತ್ರದಲ್ಲಿ ಹಾಲು, ಮೊಸರು, ಎಳನೀರು, ಪಂಚಾಮೃತ, ಅರಿಶಿಣ, ಕುಂಕುಮ, ಕೇಸರಿ ನಾನಾ ಬಗೆಗಿನ ಅಭಿಷೇಕ ನೇರವೇರಿಸಿ ನಂತರ ವಿವಿಧ ಬಗೆಯ ಹೂವುಗಳಿಂದ ಶೃಂಗರಿಸಿ ಮಧ್ಯಾಹ್ನ 12.30ಕ್ಕೆ ಮಹಾ ಮಂಗಳಾತಿ ನೇರವೇರಿಸಲಾಯಿತು. ಭಕ್ತಾದಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಪ್ರಸಾದ ವಿನಿಯೋಗ ನೆರವೇರಿಸಲಾಯಿತು. ಇನ್ನು ಕೊಳ್ಳೇಗಾಲ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲೂ ಕೂಡ ವಿಜೃಂಭಣೆಯಿಂದ ಹನುಮ ಜಯಂತಿ ಆಚರಿಸಲಾಯಿತು.